Karnataka logo

Karnataka Tourism
GO UP
Basavanagudi Kadalekai Parishe

ಬಸವನಗುಡಿ ಕಡಲೆ ಕಾಯಿ ಪರಿಷೆ

separator
  /  ಬಸವನಗುಡಿ ಕಡಲೆ ಕಾಯಿ ಪರಿಷೆ

ಬಸವನಗುಡಿ ಕಡಲೆ ಕಾಯಿ ಪರಿಷೆ ಬೆಂಗಳೂರು ನಗರದ ಬಸವನಗುಡಿ ಪ್ರದೇಶದಲ್ಲಿ ನಡೆಯುವ ವಾರ್ಷಿಕ ನೆಲಗಡಲೆ ಜಾತ್ರೆ. ಬಸವನಗುಡಿ ಕಡಲೆ ಕಾಯಿ ಪರಿಷೆಯನ್ನು ಬುಲ್ ಟೆಂಪಲ್ ರಸ್ತೆಯ ಎರಡೂ ಬದಿಗಳಲ್ಲಿ ಮತ್ತುಸುತ್ತಮುತ್ತಲಿನ ಪ್ರದೇಶದಲ್ಲಿ ಎರಡು ದಿನಗಳ ಕಾಲ ನಡೆಸಲಾಗುತ್ತದೆ.

ಇತಿಹಾಸ:

ಬೆಂಗಳೂರು ಗಾತ್ರದಲ್ಲಿ ಬೆಳೆದು ಮಹಾ ನಗರವಾಗುವ ಮೊದಲು, ಬಸವನಗುಡಿಯ ಪಕ್ಕದ ಹಳ್ಳಿಗಳಲ್ಲಿ ಪ್ರತಿ ವರ್ಷ ನೆಲಗಡಲೆ (ಶೇಂಗಾ) ಬೆಳೆಯುತ್ತಿದ್ದರು. ಆದರೆ ಕಟಾವಿಗೆ ಸಿದ್ಧವಾದ ನೆಲಗಡಲೆಯನ್ನೆಲ್ಲ ಗದ್ದೆಗೆ ದಾಳಿ ಇಡುತ್ತಿದ್ದ ಬಸವವೊಂದು ನಾಶಪಡಿಸುತ್ತಿತ್ತು. ತಮ್ಮ ಬೆಳೆಯನ್ನು ರಕ್ಷಿಸಿಕೊಳ್ಳಲು ರೈತರು ತಮ್ಮ ಮೊದಲ ಬೆಳೆಯನ್ನು ಬಸವನಿಗೆ ಅರ್ಪಿಸಿ ಬಸವ (ನಂದಿ)ನನ್ನ ಪ್ರಾರ್ಥಿಸಲು ಆರಂಭಿಸಿದರು. ಬಸವನಗುಡಿ ಪ್ರದೇಶದಲ್ಲಿ ನಂದಿಯ ವಿಗ್ರಹವೊಂದು ದೊರಕಿತು ಮತ್ತು ಈ ಸ್ಥಳದಲ್ಲಿ ಕೆಂಪೇಗೌಡರು 16 ನೇಶತಮಾನದಲ್ಲಿ ನಂದಿಯ ಸುತ್ತಲೂ ದೇವಾಲಯವನ್ನು ನಿರ್ಮಿಸಿದರು. ಇದನ್ನು ಬಸವನ ಗುಡಿ ಅಥವಾ ಬಿಗ್ ಬುಲ್ ಟೆಂಪಲ್ ಎಂದು ಕರೆಯಲಾಗುತ್ತದೆ. ಕಡಲೆ ಕಾಯಿ ಪರಿಷೆ ಈ ದೇವಾಲಯದ ಸುತ್ತ ಕೇಂದ್ರೀಕೃತವಾಗಿದೆ ಮತ್ತು ಬಸವ ರೈತರು ಅರ್ಪಿಸಿದ ನೆಲಗಡಲೆಯನ್ನು ಸ್ವೀಕರಿಸಿ ಆಶೀರ್ವದಿಸುತ್ತಾನೆ ಎಂಬ ನಂಬಿಕೆಯಿದೆ. 

ಏನನ್ನು ನಿರೀಕ್ಷಿಸಬಹುದು?

ಕಡಲೆಕಾಯಿ ಪರಿಷೆ  ಸಮಯದಲ್ಲಿ ಗ್ರಾಹಕರು ನೆಲಗಡಲೆಗಳನ್ನು ರೈತರಿಂದ ನೇರವಾಗಿ ಮಾರುಕಟ್ಟೆ ದರಕ್ಕಿಂತ ಅಗ್ಗವಾಗಿ ಖರೀದಿಸುತ್ತಾರೆ. ಕಡಲೆಕಾಯಿ ಪರಿಷೆಯ ಸಂದರ್ಭದಲ್ಲಿ ಬಸವನ ಗುಡಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ನಡೆಯುತ್ತದೆ. ಅಲಂಕೃತ ಬೀದಿಗಳಲ್ಲಿ ಸಾಕಷ್ಟು ಶಾಪಿಂಗ್ ಆಯ್ಕೆಗಳು, ಆಹಾರ ಮಳಿಗೆಗಳು, ಆಟಗಳು ಮತ್ತು ಮಕ್ಕಳಿಗೆ ಆಟಿಕೆಗಳು ಇರುತ್ತವೆ. ಬಸವನಗುಡಿ ಮತ್ತು ಸುತ್ತಮುತ್ತಲಿನ ಜನರು ಕಡಲೆಕಾಯಿ ಪರಿಷೆಯನ್ನು ಕಾತರದಿಂದ ಎದುರು ನೋಡುತ್ತಾರೆ ಮತ್ತು ಸಂಭ್ರಮಾಚರಣೆಗಳಲ್ಲಿ ಪಾಲ್ಗೊಳ್ಳುತ್ತಾರೆ.

ಯಾವಾಗ:

ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದಂದು ಬಸವನಗುಡಿ ಕಡಲೆ ಕೈ ಪರಿಷೆ ನಡೆಯುತ್ತದೆ. ಇದು ಸಾಮಾನ್ಯವಾಗಿ ನವೆಂಬರ್ ಕೊನೆಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಬರುತ್ತದೆ. ನಿಖರವಾದ ದಿನಾಂಕಗಳನ್ನು ತಿಳಿಯಲು ಪ್ರತಿ ವರ್ಷ ನವೆಂಬರ್‌ನಲ್ಲಿ ನಿಮ್ಮ  ಆತಿಥೇಯರೊಂದಿಗೆ ಪರಿಶೀಲಿಸಿ ಅಥವಾ ಸ್ಥಳೀಯ ಮಾಧ್ಯಮ ಪ್ರಕಟಣೆಯನ್ನು ಗಮನಿಸಿ.