Karnataka Tourism
GO UP

ಹಿಮವದ್ ಗೋಪಾಲಸ್ವಾಮಿ ಬೆಟ್ಟ

separator
ಕೆಳಗೆ ಸ್ಕ್ರಾಲ್ ಮಾಡಿ

ಹಿಮವದ್ ಗೋಪಾಲಸ್ವಾಮಿ ಬೆಟ್ಟ

ಹಿಮವದ್ ಗೋಪಾಲಸ್ವಾಮಿ ಬೆಟ್ಟ ವು ಬಂಡೀಪುರ ರಾಷ್ಟ್ರೀಯ ಉದ್ಯಾನದ ಅತಿ ಎತ್ತರದ ಶಿಖರವಾಗಿದೆ. ಮೈಸೂರು ಜಿಲ್ಲೆಯ ಗುಂಡ್ಲುಪೇಟೆ ಬಳಿ ಇರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಹಚ್ಚ ಹಸಿರಿನಿಂದ ಕೂಡಿದ ನೈಸರ್ಗಿಕ ಪರಿಸರದಿಂದಾಗಿ ಪ್ರವಾಸಿಗರನ್ನು ಆಕರ್ಷಿಸುತ್ತದೆ.

ವೇಣುಗೋಪಾಲಸ್ವಾಮಿ ದೇವಸ್ಥಾನ: 14 ನೇ ಶತಮಾನದಲ್ಲಿ ಅಗಸ್ತ್ಯ ಋಷಿ ನಿರ್ಮಿಸಿದ ವೇಣುಗೋಪಾಲಸ್ವಾಮಿ ದೇವಸ್ಥಾನದಲ್ಲಿ ಭಗವಾನ್ ಕೃಷ್ಣ (ವೇಣುಗೋಪಾಲ ಸ್ವಾಮಿ) ನೃತ್ಯದ ಭಂಗಿಯಲ್ಲಿ ನಿಂತು ತನ್ನ ಕೈಯಲ್ಲಿ ಕೊಳಲು ನುಡಿಸುವ ವಿಗ್ರಹವಿದೆ. ವಿಗ್ರಹದ ಹಿಂದಿನ ಫಲಕವು ಕೃಷ್ಣನ ಪತ್ನಿಯರಾದ ಸತ್ಯಭಾಮ, ರುಕ್ಮಿಣಿ ಮತ್ತು ನೆಚ್ಚಿನ ಪ್ರಾಣಿ ಹಸು ಮತ್ತು ಗೋಪಾಲಕರ ಕೆತ್ತನೆಗಳನ್ನು ಒಳಗೊಂಡಿದೆ.

ಪ್ರಕೃತಿ: ವೇಣುಗೋಪಾಲಸ್ವಾಮಿ ದೇವಾಲಯದ ಸುತ್ತಲಿನ ಪ್ರದೇಶವು ಅತ್ಯಂತ ಹಸಿರಾಗಿದ್ದು ನಯನ ಮನೋಹರವಾಗಿದೆ. ಹೆಚ್ಚಿನ ದಿನಗಳಲ್ಲಿ ದೂರದಲ್ಲಿ ಕಾಣುವ ಬಿಳಿ ಮೋಡವು ಮಂಜು ಮುಸುಕಿದ ಅನಿಸಿಕೆ ನೀಡುತ್ತದೆ. ಹಾಗಾಗಿ “ಹಿಮವದ್” ಎಂಬ ಹೆಸರು ಬಂದಿದೆ. 

ಸಮಯ: ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಬೆಳಿಗ್ಗೆ 8.30 ರಿಂದ ಸಂಜೆ 4 ರವರೆಗೆ ಪ್ರವೇಶವಿದೆ

ಹತ್ತಿರದಲ್ಲಿ ಇನ್ನೇನಿದೆ? ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಜೊತೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನ (20 ಕಿ.ಮೀ) ಮತ್ತು ನಂಜನಗುಡು (55 ಕಿ.ಮೀ) ಭೇಟಿ ನೀಡಬಹುದಾದ ಕೆಲವು ಸ್ಥಳಗಳಾಗಿವೆ. ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿ ಸೂರ್ಯಕಾಂತಿ ತೋಟಗಳನ್ನೂ ನೋಡಬಹುದಾಗಿದೆ. 

ತಲುಪುವುದು ಹೇಗೆ?

ಹಿಮವದ್ ಗೋಪಾಲಸ್ವಾಮಿ ಬೆಟ್ಟ ಬೆಂಗಳೂರಿನಿಂದ 220 ಕಿ.ಮೀ ಮತ್ತು ಮೈಸೂರಿನಿಂದ 80 ಕಿ.ಮೀ ದೂರದಲ್ಲಿದೆ. ಬೆಟ್ಟದ ಬುಡದಿಂದ ಪ್ರವಾಸಿಗರು ಹಿಮವದ್ ಗೋಪಾಲಸ್ವಾಮಿ ಬೆಟ್ಟವನ್ನು ತಲುಪಲು ಸ್ಥಳೀಯ ಆಡಳಿತ ಆಯೋಜಿಸಿದ ಬಸ್ ಹತ್ತಬೇಕಾಗಿದೆ. ಬೆಟ್ಟದ ಮೇಲೆ ಖಾಸಗಿ ವಾಹನಗಳನ್ನು ಅನುಮತಿಸಲಾಗುವುದಿಲ್ಲ.

ವಸತಿ: ಗುಂಡ್ಲುಪೆಟೆ ಪಟ್ಟಣದಲ್ಲಿ , (20 ಕಿ.ಮೀ ದೂರ ) ಉಳಿಯಲು ವಸತಿ ಗೃಹಗಳಿವೆ. ಜಂಗಲ್ ಲಾಡ್ಜಸ್ ಮತ್ತು ರೆಸಾರ್ಟ್‌ ನಡೆಸುವ  ಬಂಡೀಪುರ ಸಫಾರಿ ಲಾಡ್ಜ್ ಗೋಪಾಲಸ್ವಾಮಿ ಬೆಟ್ಟದಿಂದ 16 ಕಿ.ಮೀ ದೂರದಲ್ಲಿದೆ . ಈ ಪ್ರದೇಶದಲ್ಲಿ ಹಲವಾರು ಹೋಂ ಸ್ಟೇಗಳು ಮತ್ತು ರೆಸಾರ್ಟ್‌ಗಳು ಲಭ್ಯವಿದೆ. ಮೈಸೂರು ನಗರದಲ್ಲಿ ಹೆಚ್ಚಿನ ವಾಸ್ತವ್ಯದ ಆಯ್ಕೆಗಳು ಲಭ್ಯವಿದೆ.

ವೆಬ್‌ಸೈಟ್: ಇಲ್ಲಿ ಕ್ಲಿಕ್ ಮಾಡಿ

Tour Location

Leave a Reply

Accommodation
Meals
Overall
Transport
Value for Money